Belagavi NewsBelgaum NewsKarnataka NewsLatestPolitics

*ಅರಳಿಕಟ್ಟಿಯಲ್ಲಿ ₹1 ಕೋಟಿ ವೆಚ್ಚದ ಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ವೇಗ*

ಸ್ಲ್ಯಾಬ್ ಕಾಮಗಾರಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್


ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಅರಳಿಕಟ್ಟಿ ಗ್ರಾಮದಲ್ಲಿ ಸುಮಾರು ₹1 ಕೋಟಿ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದ ಮೇಲ್ಚಾವಣಿಯ ಕಾಂಕ್ರೀಟ್ (ಸ್ಲ್ಯಾಬ್) ಕಾಮಗಾರಿಗೆ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪೂಜೆ ನೆರವೇರಿಸಿ ಚಾಲನೆ ನೀಡಿದರು.

Home add -Advt


ಗ್ರಾಮದ ಪ್ರಮುಖ ಧಾರ್ಮಿಕ ಕೇಂದ್ರವಾಗಿ ರೂಪುಗೊಳ್ಳುತ್ತಿರುವ ಶ್ರೀ ಬಸವೇಶ್ವರ ದೇವಸ್ಥಾನದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ದೇವಸ್ಥಾನದ ಸ್ಲ್ಯಾಬ್ ಕಾಮಗಾರಿಗೆ ವಿಧಿವತ್ತಾಗಿ ಪೂಜೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದರು. ದೇವಸ್ಥಾನದ ನಿರ್ಮಾಣ ಕಾರ್ಯವು ಉತ್ತಮ ಗುಣಮಟ್ಟದಲ್ಲಿ ಹಾಗೂ ಶೀಘ್ರವಾಗಿ ಪೂರ್ಣಗೊಳ್ಳಲಿ ಎಂದು ಅವರು ಹಾರೈಸಿದರು.


ಶ್ರೀ ಬಸವೇಶ್ವರ ದೇವಸ್ಥಾನವು ಗ್ರಾಮಸ್ಥರ ಧಾರ್ಮಿಕ ಭಕ್ತಿ ಹಾಗೂ ಸಾಮಾಜಿಕ ಒಗ್ಗಟ್ಟಿನ ಪ್ರತೀಕವಾಗಲಿದೆ. ದೇವಾಲಯಗಳು ಕೇವಲ ಪೂಜಾ ಸ್ಥಳಗಳಾಗಿರದೆ, ಗ್ರಾಮೀಣ ಭಾಗದಲ್ಲಿ ಜನರನ್ನು ಒಗ್ಗೂಡಿಸುವ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆಯಾಗುವ ಪ್ರಮುಖ ಕೇಂದ್ರಗಳಾಗಿವೆ. ಈ ಹಿನ್ನೆಲೆಯಲ್ಲಿ ಅರಳಿಕಟ್ಟಿಯಲ್ಲಿ ನಿರ್ಮಾಣವಾಗುತ್ತಿರುವ ದೇವಸ್ಥಾನವು ಗ್ರಾಮದ ಅಭಿವೃದ್ಧಿಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಲಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.


ದೇವಸ್ಥಾನದ ನಿರ್ಮಾಣ ಕಾರ್ಯದಲ್ಲಿ ಗ್ರಾಮಸ್ಥರು ಹಾಗೂ ಭಕ್ತರು ತೋರುತ್ತಿರುವ ಆಸಕ್ತಿ ಮತ್ತು ಸಹಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕಾಮಗಾರಿ ಸುಸೂತ್ರವಾಗಿ ಪೂರ್ಣಗೊಳ್ಳಲು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು. ಗ್ರಾಮಸ್ಥರ ಬಹುದಿನಗಳ ಆಶಯದಂತೆ ಸುಸಜ್ಜಿತ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದರು.


ಪೂಜಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಪರಮಪೂಜ್ಯ ಶ್ರೀ ಶಿವಮೂರ್ತಿ ಮಹಾಸ್ವಾಮಿಗಳು, ಸಿದ್ದಣ್ಣ ಸಿಂಗಾಡಿ, ಬಸವರಾಜ ಉಪ್ಪಾರ, ಹೊಳಬಸಪ್ಪ ಕರಿಲಿಂಗಣ್ಣವರ, ಗುರಪ್ಪ ಹೆಬ್ಬಾಳಕರ್, ಅಣ್ಣಪ್ಪ ಪಾಟೀಲ, ಮಂಜು ಪಾರ್ವತಿ, ಬಸವರಾಜ ಸತ್ತಿಗೇರಿ, ಶಿವಬಸಪ್ಪ ತಿಗಡಿ, ಕಲ್ಲಯ್ಯ ಪೂಜಾರಿ, ಈರಯ್ಯ ಮಠಪತಿ, ಶಂಕರ ಯಳ್ಳೂರ್ ಸೇರಿದಂತೆ ಗ್ರಾಮಸ್ಥರು, ದೇವಸ್ಥಾನ ನಿರ್ಮಾಣ ಸಮಿತಿ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಗ್ರಾಮದ ಪ್ರಮುಖರು ಹಾಗೂ ಭಕ್ತರ ಸಮ್ಮುಖದಲ್ಲಿ ನಡೆದ ಪೂಜಾ ಕಾರ್ಯಕ್ರಮವು ಧಾರ್ಮಿಕ ಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.

Related Articles

Back to top button