Kannada NewsKarnataka NewsLatest

*ಕೆಎಸ್‌ಆರ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಭೋಗಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಪ್ಲಾಟ್‌ಫಾರ್ಮ್ ನಂ. 1 ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ರಾತ್ರಿ ಸುಮಾರು 11:30ರ ವೇಳೆಗೆ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ಇಡೀ ಬೋಗಿಯನ್ನು ಆವರಿಸಿದ್ದು, ದಟ್ಟ ಹೊಗೆ ಆವರಿಸಿಕೊಂಡಿತ್ತು. ಬೋಗಿಯಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Home add -Advt

ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Articles

Back to top button