Kannada NewsKarnataka NewsLatest
*BREAKING: ಎಕ್ಸ್ ಪ್ರೆಸ್ ವೇನಲ್ಲಿ ಕಾರು ಪಲ್ಟಿಯಾಗಿ ದುರಂತ: ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ದಕಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ನಲವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದೇವೇಂದ್ರ ಕುಮಾರ್ (45), ಜಿಷ್ಣು (೧೫), ದೀಕ್ಷಿತಾ (20), ಶಾರದಾಬಾಯಿ (70) ಮೃತ ದುರ್ದೈವಿ. ಕಾರಿನಲ್ಲಿದ್ದ ಉಳಿದ ನಾಲ್ವರಿಗೆ ಗಂಭೀರ ಗಯಾಗಳಾಗಿವೆ. ಗಾಯಾಳುಗಳನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಿರುಪತಿಯಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




