Karnataka NewsLatestPolitics

*BREAKING: ಬೆಳ್ಳಂ ಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರು, ವರ್ತಕರ ಬಳಿ ಮಾಹಿತಿ ಪಡೆದರು.

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಇಂದು ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಮಾರುಕಟ್ಟೆಯಲ್ಲಿನ ರೈತರು ಮತ್ತು ವರ್ತಕರ ಬಳಿ ಮಾತುಕತೆ ನಡೆಸಿ ಮಾಹಿತಿ ಪಡೆದು ಅವರ ಸಮಸ್ಯೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಿಎಂ ಡಿ.ಕೆ.ಶಿವಕುಮಾರ್, ತೂಕದಲ್ಲಿ ಮೋಸ ನಡೆಯುತ್ತಿದೆಯೇ ಎಂದು ರೈತರನ್ನು ನೇರವಾಗಿ ಪ್ರಶ್ನಿಸಿದರು.

Home add -Advt

ರೈತರು ತಮಗೆ ಎದುರಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಸಿಎಂ ಮುಂದೆ ತೋಡಿಕೊಂಡರು. ಅಳಲನ್ನು ವ್ಯಕ್ತಪಡಿಸಿದ ರೈತರು, ಕೃಷಿ ಸಚಿವರು ಮಾರುಕಟ್ಟೆಗೆ ಬಂದು ತಮ್ಮ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ದೂರಿದರು.

ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿದ ಸಿಎಂ, ರೈತರಿಗೆ ಆಶ್ವಾಸನೆ ನೀಡಿದರು. ಮುಖ್ಯಮಂತ್ರಿಗಳ ಭೇಟಿಯಿಂದಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗಬಹುದೆಂಬ ಭರವಸೆಯನ್ನು ರೈತರು ವ್ಯಕ್ತಪಡಿಸಿದರು.

ಇದೇ ವೇಳೆ ಯಶವಂತಪುರ ಎಪಿಎಂಸಿ ಮಾರುಕಟ್ಟೆಯ ಸುಗಮ ಕಾರ್ಯನಿರ್ವಹಣೆ ಮತ್ತು ರೈತರ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದರು.

Related Articles

Back to top button