Belagavi NewsBelgaum NewsKannada NewsKarnataka News
*ಸೆ.11 ರಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರದ ಸೂಚನೆಯನ್ವಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಸೆಪ್ಟೆಂಬರ 5 ರಂದು ಖಾನಾಪುರ ತಾಲೂಕಿನ ಲೋಕಮಾನ್ಯ ಭವನದಲ್ಲಿ ನಿಗದಿಯಾಗಿದ್ದ ಪ್ರಜಾ ಸೇವೆ ಆಂದೋಲನ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿ ದಿನಾಂಕ:11-09-2026 ರ ಶುಕ್ರವಾರ ಯರಗಟ್ಟಿಯ ಶ್ರೀಶೈಲ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮರು ನಿಗದಿಪಡಿಸಲಾಗಿದೆ.
ಸಭೆಯಲ್ಲಿ ಸ್ಥಳೀಯ ಶಾಸಕರು ಉಪಸ್ಥಿತರಿರಲಿದ್ದು, ಯರಗಟ್ಟಿ/ಸವದತ್ತಿ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




