
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ಸಿ ಪೈಶುವೈದ್ಯಕೀಯ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಲಬುರಗಿಯಲ್ಲಿನ ಅಭ್ಯರ್ಥಿ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಪಶುವೈದ್ಯ ನೇಮಕಾತಿ ಅಭ್ಯರ್ಥಿ ಮಮತಾ ಮನೆ ಮೇಲೆ ಸಿಐಡಿ ದಾಳಿ ನಡೆದಿದೆ.
ಕಲಬುರಗಿ ನಗರದ ನ್ಯೂ ಓಜಾ ಲೇಔಟ್ನಲ್ಲಿರುವ ಮಮತಾ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಕೆಪಿಎಸ್ಸಿ ಸದಸ್ಯೆ ಶಾಂತಾ ಹೊಸಮನಿ ಕಡೆಯಂದ ಅಭ್ಯರ್ಥಿ ಮಮತಾ ನೇಮಕವಾಗಿದ್ದರು. ಡೀಲ್ ಮಾಡಿ ನೇಮಕ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣ ಬೆಳಕಿಗೆ ಬಂದಾಗಿನಿಂದ ಶಾಂತಾ ಹೊಸಮನಿ ತಲೆಮರೆಸಿಕೊಂಡಿದ್ದು. ಅವರ ಪತ್ತೆಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.



