
ಪ್ರಗತಿವಾಹಿನಿ ಸುದ್ದಿ: ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡಿತ್ತಿದ್ದ ಕಾರ್ಮಿಕನೊಬ್ಬ ಕಾರ್ಖಾನೆಯ ಬಾಯ್ಲರ್ ಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಕೆ.ಶೆಟ್ಟಿಹಳ್ಳಿಯ ಚರಣ್ ಕುಮಾರ್ (33) ಮೃತ ಕಾರ್ಮಿಕ. ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಈ ದುರಂತ ಸಂಭವಿಸಿದೆ ಎಂದು ಆರೋಪಿಸಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಚರಣ್ ಕುಮಾರ್ ಎಂಬಾತ ಶ್ರೇಯ ಏಜೆನ್ಸಿಯಡಿ ಗುತ್ತಿಗೆ ಆಧಾರದಲ್ಲಿ ಮೈಶುಗರ್ ಕಾರ್ಖಾನೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದ. ಸೆಪ್ಟೆಂಬರ್ 3ರಂದು ಕಾರ್ಖಾನೆಯಲ್ಲಿ ಬಾಯ್ಲರ್ಗೆ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕಾರ್ಮಿಕ ಕೊನೆಯುಸಿರೆಳೆದಿದ್ದಾನೆ.




