Belagavi NewsBelgaum NewsKannada NewsKarnataka NewsPolitics

*ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಆಸೀಫ್ ಸೇಠ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಠ್ ಅವರು ನೂತನ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ರುಕ್ಮಣಿ ನಗರ ಪ್ರದೇಶದ ನಿವಾಸಿಗಳ ಬಹುಕಾಲದ ಬೇಡಿಕೆಯಾಗಿದ್ದ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರ ಹಾಗೂ ಉತ್ತಮ ಮೂಲಸೌಕರ್ಯ ಸೌಲಭ್ಯ ದೊರೆಯಲಿದೆ.

Home add -Advt

ಈ ಸಂದರ್ಭದಲ್ಲಿ ನಿವಾಸಿಗಳೊಂದಿಗೆ ಚರ್ಚಿಸಿದ ಶಾಸಕರು, ಪ್ರದೇಶದ ಅಗತ್ಯತೆಗಳನ್ನು ಆಲಿಸಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ನಿವಾಸಿಗಳ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿ, ಕ್ಷೇತ್ರದ ವಿವಿಧ ಭಾಗಗಳಲ್ಲಿ ಅಗತ್ಯ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಆಸಿಫ್ (ರಾಜು) ಸೇಠ್ ಹೇಳಿದರು.

ಯುವ ನಾಯಕ ಅಮಾನ್ ಸೇಠ್, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Back to top button