Belagavi NewsBelgaum NewsKarnataka NewsLatest

*₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ*

ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕೀಣೆ ಗ್ರಾಮದಲ್ಲಿ ಭಕ್ತರ ಬಹುದಿನಗಳ ಆಶಯವಾಗಿರುವ ಶ್ರೀ ವಿಠ್ಠಲ ರುಕ್ಮಾಯಿ ಮಂದಿರದ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ₹65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ (ಸ್ಲ್ಯಾಬ್) ಕಾಮಗಾರಿಗೆ ಶನಿವಾರ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.

Home add -Advt

ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಸ್ಲ್ಯಾಬ್ ಕಾಮಗಾರಿಗೆ ಚಾಲನೆ ನೀಡುವ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ಗ್ರಾಮದ ಆರಾಧ್ಯ ದೈವವಾಗಿರುವ ಶ್ರೀ ವಿಠ್ಠಲ ರುಕ್ಮಾಯಿ ಮಂದಿರವು ಗ್ರಾಮಸ್ಥರ ಭಕ್ತಿ, ಶ್ರದ್ಧೆ ಹಾಗೂ ಧಾರ್ಮಿಕ ನಂಬಿಕೆಯ ಪ್ರತೀಕವಾಗಿದ್ದು, ನೂತನ ಮಂದಿರ ನಿರ್ಮಾಣದಿಂದ ಗ್ರಾಮದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಮಂದಿರ ನಿರ್ಮಾಣ ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಿಂದ ಕೈಗೊಳ್ಳುವುದರ ಜೊತೆಗೆ, ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳಲಾಗುವುದು. ನಿರ್ಮಾಣ ಕಾರ್ಯ ಪೂರ್ಣಗೊಂಡ ಬಳಿಕ ಶೀಘ್ರದಲ್ಲೇ ಮಂದಿರವನ್ನು ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಲಾಯಿತು.


ಮಂದಿರ ನಿರ್ಮಾಣವು ಕೇವಲ ಕಟ್ಟಡ ನಿರ್ಮಾಣಕ್ಕೆ ಸೀಮಿತವಾಗದೆ, ಗ್ರಾಮದ ಜನರ ಧಾರ್ಮಿಕ ಭಾವನೆ, ಒಗ್ಗಟ್ಟು ಮತ್ತು ಭಕ್ತಿಯ ಕೇಂದ್ರವಾಗಿ ರೂಪುಗೊಳ್ಳಲಿದೆ.

ಮಂದಿರದಲ್ಲಿ ಮುಂದಿನ ದಿನಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜೆ-ಪುನಸ್ಕಾರಗಳು ಹಾಗೂ ಉತ್ಸವಗಳನ್ನು ಆಯೋಜಿಸಲು ಅನುಕೂಲವಾಗಲಿದೆ ಎಂಬ ಆಶಯವನ್ನು ಗ್ರಾಮಸ್ಥರು ವ್ಯಕ್ತಪಡಿಸಿದರು.

ಸ್ಲ್ಯಾಬ್ ಕಾಮಗಾರಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Back to top button