Belagavi NewsBelgaum NewsKannada NewsKarnataka News
*ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮ ಮುತ್ತಿಗೆ ಹಾಕಿದ ರೈತರು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೃಷ್ಣಾ ಕಿತ್ತೂರ ಗ್ರಾಮದಲ್ಲಿ ಇಂದು ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮಕ್ಕೆ ರೈತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಸ್ಥಳಕ್ಕೆ ಆಗಮಿಸಿದ ರೈತರು, ಸತತವಾಗಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಧಿಕ್ಕಾರ ಕೂಗಿದರು. ವಿದ್ಯುತ್ ಪೂರೈಕೆಯಲ್ಲಿ ಕಡಿತ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರೈತರಿಗೆ ನಿರಂತರ ಮತ್ತು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದ ರೈತರು, ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದರು.




