CrimeKannada NewsKarnataka NewsLatest

*ಆಮೆ, ನವಿಲು ಬೇಟೆ: 7 ಜನರ ಬಂಧನ, 6 ನಾಡ ಬಂದೂಕು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಅರಣ್ಯ ಪ್ರದೇಶದಲ್ಲಿ ಆಮೆ, ನವಿಲು ಮತ್ತು 12 ವನ್ಯಜೀವಿಗಳನ್ನು ಬೇಟೆದ್ದ ಪ್ರಕರಣದಲ್ಲಿ 7 ಜನರನ್ನು ಬಂಧಿಸಿ, ಆರು ನಾಡಬಂದೂಕುಗಳು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಸಿಕೊಂಡಿರುವ ಘಟನೆ ನಡೆದಿದೆ.

ಯಾದಗಿರಿ ಪ್ರಾದೇಶಿಕ ಅರಣ್ಯವಲಯದ ಅರಕೇರಾ (ಕೆ) ಶಾಖೆಯ ಮೋಟ್ನಳ್ಳಿ ಗಸ್ತಿನ ಬಗ್ಗಲುಮಡು ಸೆಕ್ಷನ್-4ರ ಸರ್ವೇ ನಂ.30ರ ಅರಣ್ಯ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Home add -Advt

ಅಧಿಕಾರಿಗಳು ಇಲಾಖೆಯ ವಾಹನದಲ್ಲಿ ರಾತ್ರಿ ಗಸ್ತು ನಡೆಸುತ್ತಿದ್ದರು. ಈ ವೇಳೆ ಅರಣ್ಯ ಪ್ರದೇಶದಲ್ಲಿ ಜನರ ಗುಂಪಿನ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆಗ ಏಳು ಮಂದಿ ಅಲ್ಲಿ ಇರುವುದನ್ನು ಪತ್ತೆಯಾಗಿದೆ. ಸ್ಥಳದಲ್ಲಿ ಎರಡು ನವಿಲುಗಳನ್ನು ಬೇಟೆಯಾಡಿ ಸುಟ್ಟಿರುವುದು ಹಾಗೂ ಅವುಗಳ ಮಾಂಸ ಪತ್ತೆಯಾಗಿದೆ. ಎರಡು ಆಮೆಗಳು ಮತ್ತು 12 ಜೀವಿಗಳನ್ನು ಹಿಡಿದಿರುವುದು ಕಂಡುಬಂದಿದೆ.

ವಲಯ ಅರಣ್ಯಾಧಿಕಾರಿ ಬುರಾನುದ್ದೀನ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ಹಂದ್ರಾಳ ನೇತತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಬಂಧಿತರನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಬೀಮನಳ್ಳಿ ಸೇರಿದಂತೆ ವಿವಿಧ ಗ್ರಾಮದ ಆರೋಪಿಗಳಾದ ನಿಂಗಪ್ಪ ವಾಸುದೇವ, ಕರೇಪ್ಪ ಕಾಂತಪ್ಪ ಯಲ್ಲಲಿಂಗ, ಬಸವರಾಜ ಹಾಗೂ ಮಲ್ಲಪ್ಪ ಎಂದು ಗುರುತಿಸಲಾಗಿದೆ. ಬಂಧಿತರೆಲ್ಲರೂ ಕೂಲಿ ಕಾರ್ಮಿಕರು ಎಂದು ಅರಣ್ಯ ಇಲಾಖೆ ದಾಖಲೆಯಲ್ಲಿ ತಿಳಿಸಲಾಗಿದೆ.

ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಕರ್ನಾಟಕ ಅರಣ್ಯ ಕಾಯ್ದೆ ಹಾಗೂ ಆಯುಧ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.

Related Articles

Back to top button