Kannada NewsKarnataka NewsLatest

*ಬೆಂಗಳೂರು ಸಂಚಾರ ಪೊಲೀಸರಿಂದ DD & Over Speed ವಿರುದ್ಧ ಬೃಹತ್ ಕಾರ್ಯಾಚರಣೆ: ಒಂದೇ ವಾರದಲ್ಲಿ 763 ಕೇಸ್!*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಹಾಗೂ ಅತಿವೇಗ ಚಾಲಕರ ಹಾವಳಿ ತಡೆಗಟ್ಟಲು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ದಿನಾಂಕ 07.09.2026 ರಿಂದ 13.09.2026 ರವರೆಗೆ ನಗರದ 53 ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಈ ವಿಶೇಷ ಡ್ರೈವ್ ನಡೆಸಲಾಗಿದೆ ಎಂದು ದಿನಾಂಕ 14.09.2026 ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Home add -Advt

ಕಾರ್ಯಾಚರಣೆಯ ವಿವರ:

  1. ಕುಡಿದು ವಾಹನ ಚಾಲನೆ (Drunk & Driving) ವಿರುದ್ಧ:
  • ಪರಿಶೀಲಿಸಲಾದ ಒಟ್ಟು ವಾಹನಗಳ ಸಂಖ್ಯೆ: 38,680
  • ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ: 560
  1. ಅತಿವೇಗ ಚಾಲನೆ (Over Speeding) ವಿರುದ್ಧ:
  • ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ: 203
  • ಸಂಗ್ರಹಿಸಿದ ಒಟ್ಟು ದಂಡದ ಮೊತ್ತ: ರೂ. 2,12,000/-

ಬೆಂಗಳೂರು ನಗರದಲ್ಲಿ ರಸ್ತೆ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಈ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

Related Articles

Back to top button