Karnataka NewsLatestPolitics

*ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ದಾಳಿ ಕೇಸ್: ಇಡಿ ನಿರ್ದೇಶಕರ ನೇತೃತ್ವದಲ್ಲಿ ಮಹತ್ವದ ಸಭೆ*

ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಡಿ ನಿರ್ದೇಶಕ ರಾಹುಲ್ ನವೀನ್ ನೇತೃತ್ವದಲ್ಲಿ ಹತ್ವದ ಸಭೆ ನಡೆದಿದೆ.

ಜಾಲಹಳ್ಳಿಯಲ್ಲಿರುವ ಇಡಿ ಕಚೇರಿಯಲ್ಲಿ ನಿರ್ದೇಶಕ ರಾಹುಲ್ ನವೀನ್ ನೇತೃತ್ವದಲ್ಲಿ ಸಭೆ ನಡೆದಿದ್ದು, ದಾಳಿ ವೇಳೆ ಜಪ್ತಿಯಾದ ಹಣ, ವಿದೇಶಿ ಕರೆನ್ಸಿ ಹಾಗೂ ದಾಖಲೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Home add -Advt

ದೆಹಲಿಯಿಂದ ಆಗಮಿಸಿರುವ ಇಡಿ ಹಿರಿಯ ಅಧಿಕಾರಿಗಳು, ಸ್ಪೆಷಲ್ ಡೈರೆಕ್ಟರ್ ಹಾಗೂ ತಾಂತ್ರಿಕ ಸಮಿತಿ ತಂಡ ಸಭೆಯಲ್ಲಿ ಭಾಗವಹಿಸಿದೆ. ತನಿಖೆಯ ಮುಂದಿನ ಹಂತಗಳು, ವಿಚಾರಣೆ ಹಾಗೂ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆದಿದೆ. ದೆಹಲಿ ತಂಡ ಇನ್ನೂ ಎರಡು ದಿನ ಬೆಂಗಳೂರಿನಲ್ಲೇ ಉಳಿದು ದಾಖಲೆಗಳ ಪರಿಶೀಲನೆ ಮುಂದುವರಿಸಲಿದೆ.

ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ದಾಳಿಯ ಸಂದರ್ಭದಲ್ಲಿ, ಇಡಿ ಅಧಿಕಾರಿಗಳು 3 ಕೋಟಿ ರೂಪಾಯಿಗೂ ಅಧಿಕ ನಗದು ಮತ್ತು ಗಣನೀಯ ಪ್ರಮಾಣದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದರು. ಅಲ್ಲದೆ, ಹಲವಾರು ಮಹತ್ವದ ದಾಖಲೆಗಳನ್ನು ಸಹ ಜಪ್ತಿ ಮಾಡಲಾಗಿತ್ತು. ಈ ಜಪ್ತಿ ಮಾಡಿದ ಹಣ ಮತ್ತು ದಾಖಲೆಗಳ ಕುರಿತು ಸಭೆಯಲ್ಲಿ ಮರುಪರಿಶೀಲನೆ ನಡೆಸಲಾಯಿತು.

Related Articles

Back to top button