*ಖಾನಾಪುರ ನಿವಾಸಕ್ಕೆ ವಿಘ್ನ ವಿನಾಶಕ ಶ್ರೀ ಮಹಾಗಣಪತಿಯನ್ನು ಬರಮಾಡಿಕೊಂಡ ಲಕ್ಷ್ಮೀ ಹೆಬ್ಬಾಳಕರ್*

ನಾಡಿನ ಜನತೆಗೆ ಸುಖ, ಶಾಂತಿ, ಆರೋಗ್ಯ, ಐಶ್ವರ್ಯ ಕರುಣಿಸಲಿ ಎಂದು ಪ್ರಾರ್ಥನೆ
ಪ್ರಗತಿವಾಹಿನಿ ಸುದ್ದಿ: ಖಾನಾಪುರ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಖಾನಾಪುರದಲ್ಲಿರುವ ತಮ್ಮ ನಿವಾಸಕ್ಕೆ ವಿಘ್ನ ವಿನಾಶಕ ಶ್ರೀ ಮಹಾಗಣಪತಿಯನ್ನು ಭಕ್ತಿಭಾವದಿಂದ ಬರಮಾಡಿಕೊಂಡು, ವಿಶೇಷ ಪೂಜೆ ಸಲ್ಲಿಸಿದರು.
ಗಣೇಶ ಚತುರ್ಥಿಯ ಪವಿತ್ರ ಸಂದರ್ಭದಲ್ಲಿ ಮಹಾಗಣಪತಿಯನ್ನು ಸಾಂಪ್ರದಾಯಿಕವಾಗಿ ಬರಮಾಡಿಕೊಂಡ ಲಕ್ಷ್ಮೀ ಹೆಬ್ಬಾಳಕರ್ ಅವರು, ಕುಟುಂಬದ ಸದಸ್ಯರೊಂದಿಗೆ ಗಣಪತಿ ದೇವರಿಗೆ ವಿಶೇಷ ಪೂಜೆ, ಅರ್ಚನೆ ಹಾಗೂ ಆರತಿ ನೆರವೇರಿಸಿದರು. ಭಕ್ತಿಭಾವದಿಂದ ನಡೆದ ಪೂಜಾ ಕಾರ್ಯಕ್ರಮದಲ್ಲಿ ಕುಟುಂಬದ ಸದಸ್ಯರು ಪಾಲ್ಗೊಂಡು ಮಹಾಗಣಪತಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪುತ್ರ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ಸೊಸೆ ಡಾ. ಹಿತಾ ಎಂ. ಹೆಬ್ಬಾಳಕರ್ ಸೇರಿದಂತೆ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.
ವಿಘ್ನಗಳನ್ನು ನಿವಾರಿಸಿ, ಒಳಿತನ್ನು ಕರುಣಿಸುವ ವಿಘ್ನ ವಿನಾಶಕ ಶ್ರೀ ಮಹಾಗಣಪತಿ ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ ಹಾಗೂ ಐಶ್ವರ್ಯವನ್ನು ಕರುಣಿಸಲಿ. ಪ್ರತಿಯೊಂದು ಕುಟುಂಬದಲ್ಲೂ ಸಂತೋಷ, ಸಮೃದ್ಧಿ ನೆಲೆಸಲಿ ಹಾಗೂ ಸಮಾಜದಲ್ಲಿ ಸೌಹಾರ್ದತೆ, ಶಾಂತಿ ಮತ್ತು ಸಹಬಾಳ್ವೆ ಮತ್ತಷ್ಟು ಬಲಗೊಳ್ಳಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾರ್ಥಿಸಿದರು.
ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಮನೆ ಹಾಗೂ ಸುತ್ತಮುತ್ತಲಿನ ವಾತಾವರಣದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಕುಟುಂಬಸ್ಥರು ಹಾಗೂ ಆಪ್ತರೊಂದಿಗೆ ಗಣಪತಿ ಆರಾಧನೆ ನಡೆಸಿ ಹಬ್ಬವನ್ನು ಭಕ್ತಿಪೂರ್ವಕವಾಗಿ .



