Kannada NewsKarnataka NewsLatest

*BREAKING: ಹಬ್ಬ ಮುಗಿಸಿ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಹಬ್ಬದ ಸಂದರ್ಭದಲ್ಲೇ ರಾಜ್ಯದಲ್ಲಿ ಸಾಲು ಸಾಲು ದುರಂತಗಳು ಸಂಭವಿಸಿವೆ. ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಮೃತಪಟ್ಟಿರುವ ಘಟನೆ ನಡೆದಿದೆ.

ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಬಳಿ ಈ ದುರಂತ ಸಂಭವಿಸಿದೆ. ಇಂದು ಮೃತರನ್ನು ಕೊಪ್ಪ ಗ್ರಾಮದ ನಿವಾಸಿಗಳಾದ ಕಾವ್ಯಾ, ಮುತ್ತುರಾಜ್ ಮತ್ತು ಕೀರ್ತನಾ ಎಂದು ಗುರುತಿಸಲಾಗಿದೆ.

Home add -Advt

ಮೃತ ಮೂವರೂ ಗೌರಿ-ಗಣೇಶ ಹಬ್ಬದ ಆಚರಣೆಗಾಗಿ ತಮ್ಮ ಸ್ವಗ್ರಾಮವಾದ ಕೊಪ್ಪಕ್ಕೆ ಹೋಗಿದ್ದರು. ಹಬ್ಬ ಮುಗಿಸಿ ಇಂದು ಮುಂಜಾನೆ ಸ್ಕೂಟರ್‌ನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಬಳಿ ಹಾಲಿನ ಟ್ಯಾಂಕರ್ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರೂ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button