Belagavi NewsBelgaum NewsKannada NewsKarnataka NewsPolitics
*ಬೆಳಗಾವಿಯಲ್ಲಿ ನಾಲ್ವರು ಸಜೀವ ದಹನ: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆಸೀಫ್ ಸೇಠ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಮಧ್ಯರಾತ್ರಿ 2:45ಕ್ಕೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಘಟನೆಯ ಮಾಹಿತಿ ತಿಳಿದ ತಕ್ಷಣ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ ಸೇಠ್ ಹಾಗೂ ಯುವ ಮುಖಂಡ ಅಮನ ಸೇಠ್ ಅವರು 3:30ಕ್ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಶಾಸಕ ಆಸಿಫ್ (ರಾಜು) ಸೇಠ್ ಅವರು ಸಂತಾಪ ವ್ಯಕ್ತಪಡಿಸಿದರು. ಗಾಯಗೊಂಡಿರುವ ಇಬ್ಬರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.
ಮೃತರ ಕುಟುಂಬಗಳಿಗೆ ಅಗತ್ಯ ನೆರವು ದೊರೆಯುವಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುವುದಾಗಿ ಶಾಸಕರು ತಿಳಿಸಿದರು.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಸುತ್ತಮುತ್ತಲಿನ ನಿವಾಸಿಗಳಲ್ಲಿ ತೀವ್ರ ದುಃಖ ಆವರಿಸಿದೆ.



