Kannada NewsKarnataka NewsLatest

*ಅಪರಿಚಿತ ವಾಹನ ಡಿಕ್ಕಿ: ನವದಂಪತಿ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಅಪರಿಚಿತವಾಹನ ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದವರು.

Home add -Advt

ಬೈಕ್‌ನಲ್ಲಿ ಬೆಂಗಳೂರಿನ ಮಾರ್ಗದತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಉಷಾರಾಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button