Belagavi NewsBelgaum NewsCrimeKannada NewsKarnataka News

*ಚವ್ಹಾಟ ಗಲ್ಲಿ ಬೆಂಕಿ ಅವಘಡ ಪ್ರಕರಣ: ಚಿಕಿತ್ಸೆ ಫಲಿಸದೆ ತಂದೆ-ಮಗ ಸಾವು, ಮೃತರ ಸಂಖ್ಯೆ 6ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣೇಶೋತ್ಸವ ಹಬ್ಬದ ದಿನವೇ ಬೆಂಕಿ ಅವಘಡ ಸಂಭವಿಸಿ ಬೆಳಗಾವಿ ನಗರದ ಚವ್ಹಾಟ ಗಲ್ಲಿಯಲ್ಲಿ ನಾಲ್ವರು ಮೃತಪಟ್ಟು, ಮೂವರು ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಗಾಯಗೊಂಡಿದ್ದ ತಂದೆ-ಮಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಬೆಳಗಾವಿ ನಗರದ ಚವ್ಹಾಟ ಗಲ್ಲಿ ಬಳಿಯ ಢೋರ್ ಗಲ್ಲಿಯಲ್ಲಿ ಸೋಮವಾರ ಮಧ್ಯ ರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿತ್ತು. ಬೆಂಕಿಯ ಕೆನ್ನಾಲೆಯಲ್ಲಿ ಬೆಂದು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ತಂದೆ ಮಗ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Home add -Advt

ಚವ್ಹಾಟಗಲ್ಲಿಯ ನಿವಾಸಿಗಳಾದ ಭಾರತಿ ರಾಜಾರಾಮ ದಮೋನೆ (50), ಶಾರದಾ ಗಜಾನನ ದಮೋನೆ (45), ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ಅವರ ಅಂತ್ಯ ಸಂಸ್ಕಾರ ಮಂಗಳವಾರ ಸಂಜೆಯೆ ನೆರವೇರಿದೆ. ಆದರೆ ಇಂದು ಗಜಾನನ ಧಮೋನೆ ಹಾಗೂ ರೋಶನ್ ಧಮೋನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಮೂಲಕ ಢೋರ ಗಲ್ಲಿಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವ ಸಂಖ್ಯೆ 6ಕ್ಕೆ ತಲುಪಿದೆ.

Related Articles

Back to top button