Kannada NewsLatestNational

*ಗಣೇಶ ಮೂರ್ತಿ ವಿಸರ್ಜನೆ ವೇಳೆ ಅನಾಹುತ: ನೀರಿನಲ್ಲಿ ಮುಳುಗಿ 6 ವಿದ್ಯಾರ್ಥಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಗಣೇಶ ಮೂರ್ತಿ ವಿಸರ್ಜನೆಯ ವೇಳೆ 6 ವಿದ್ಯಾರ್ಥಿಗಳು ಕೆರೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

Home add -Advt

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪೆದ್ದ ಕಂಜೆರ್ಲ ಗ್ರಾಮದ ನೇರೇಡು ಚೆರುವು ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ಎಂಟು ವಿದ್ಯಾರ್ಥಿಗಳ ಪೈಕಿ ಆರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಅನಾಥಾಶ್ರಮವೊಂದರ ವಸತಿನಿಲಯದಲ್ಲಿದ್ದ ವಿದ್ಯಾರ್ಥಿಗಳು ಗಣೇಶ ವಿಸರ್ಜನೆಗೆ ತೆರಳಿದ್ದಾಗ ಮೂರ್ತಿಯನ್ನು ನೀರಿನ ಆಳಕ್ಕೆ ಕೊಂಡೊಯ್ಯುವಾಗ ಈ ದುರಂತ ಸಂಭವಿಸಿದೆ.

ಮೃತರನ್ನು ನರಸಿಂಹ ರಾಜು, ಸುಮಂತ್, ಗಣೇಶ್, ಉದಯ ಕಿರಣ್, ಶ್ಯಾಮ್ ಕುಮಾರ್ ಮತ್ತು ಸಿದ್ಧಾರ್ಥ್ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಈ ದುರಂತದ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.

ಬಾಧಿತ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವಂತೆ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು. ಅಲ್ಲದೆ, ಗಣೇಶ ವಿಸರ್ಜನಾ ಕಾರ್ಯಕ್ರಮಗಳ ಸಂದರ್ಭದಲ್ಲಿ ಎಲ್ಲೆಡೆ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳುವಂತೆಯೂ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Related Articles

Back to top button