Karnataka NewsLatestPolitics

*ಸಚಿವ ರುದ್ರಪ್ಪ ಲಮಾಣಿಗೆ ಬರೋಬ್ಬರಿ 3 ಕೋಟಿ ರೂಪಾಯಿ ದಂಡ ವಿಧಿಸಿದ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಬರೋಬ್ಬರಿ 3 ಕೋಟಿ ರೂ. ದಂಡ ವಿಧಿಸಿರುವ ಘಟನೆ ನಡೆದಿದೆ.

ನಿಯಮ ಉಲ್ಲಂಘನೆ ಮಾಡಿ ಕಲ್ಲು ಕ್ವಾರಿ ಗಣಿಗಾರಿಕೆ ನಡೆಸಿದ ಆರೋಪದಲ್ಲಿ ಸಚಿವ ಹಾಗೂ ಕಲ್ಲು ಕ್ವಾರಿ ಮಾಲೀಕರಾದ ರುದ್ರಪ್ಪ ಲಮಾಣಿ ಅವರಿಗೆ 3 ಕೋಟಿ ರೂ ದಂಡ ವಿಧಿಸಲಾಗಿದೆ.

Home add -Advt

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹುಣಸಿಕಟ್ಟಿ ಬಳಿ ಇರುವ ಕಲ್ಲು ಕ್ವಾರಿಗೆ ಸಂಬಂಧಿಸಿದಂತೆ ಈ ದಂಡ ವಿಧಿಸಲಾಗಿದೆ. ನಿಗದಿಪಡಿಸಿದ ವ್ಯಾಪ್ತಿ ಮೀರಿ ಹೆಚ್ಚುವರಿಯಾಗಿ ಕಲ್ಲು ತೆಗೆದಿರುವುದು ಹಾಗೂ ಕ್ವಾರಿ ಸುತ್ತಮುತ್ತಲಿನ ಜಾಗವನ್ನ ಒತ್ತುವರಿ ಮಾಡಿಕೊಂಡು ಕಲ್ಲು ಗಣಿಗಾರಿಕೆ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಇಲಾಖೆ ನೋಟಿಸ್‌ ಜಾರಿ ಮಾಡಿದ್ದು, ಸಚಿವರಿಗೆ 3 ಕೋಟಿ ರೂ ದಂಡ ಪಾವತಿಸಲು ಸೂಚಿಸಿದೆ.

ಕರ್ನಾಟಕ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ಸ್ ಸೆಂಟರ್ (KRSAC) ಮೂಲಕ ನಡೆಸಲಾದ ಸಮೀಕ್ಷೆಯ ಆಧಾರದ ಮೇಲೆ ನಿಯಮ ಉಲ್ಲಂಘನೆಗಳನ್ನು ಗುರುತಿಸಲಾಗಿದೆ. ದಂಡದ ಮೊತ್ತ ಪಾವತಿಸಲು 6 ತಿಂಗಳ ಗಡುವು ನೀಡಲಾಗಿದೆ.

Related Articles

Back to top button