Kannada NewsKarnataka NewsLatest

*ಸಿಲಿಂಡರ್ ಸ್ಫೋಟ: ಇಬ್ಬರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

Home add -Advt

ಹಳೆ ಹುಬ್ಬಳ್ಳಿಯ ಅಯೋಧ್ಯಾ ನಗರದಲ್ಲಿ ಈ ಘಟನೆ ನಡೆದಿದೆ. ಮೋಹನ್ ಕಲಾಲ್ (40) ಮತ್ತು ಪ್ರವೀಣ್ ಕಲಾಲ್ (46) ಮೃತ ದುರ್ದೈವಿಗಳು. ಘಟನೆಯಲ್ಲಿ ಪ್ರವೀಣ್ ಕಲಾಲ್ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಮೋಹನ್ ಕಲಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸುಮನ ಕಲಾಲ್ ಎಂಬ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳು ಮಹಿಳೆಗೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button