CrimeKannada NewsNational

*ಸೇತುವೆಯಿಂದ ಕೆಳಗೆ ಬಿದ್ದ ಬಿಎಂಡಬ್ಲ್ಯೂ ಕಾರ್: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಐಷಾರಾಮಿ ಬಿಎಂಡಬ್ಲ್ಯೂ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಮೇಲಿನಿಂದ ಕೆಳಗೆ ಬಿದ್ದು  ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಂದು ಬೆಳಗ್ಗೆ ಮುಂಬೈನಲ್ಲಿ ಕೋಸ್ಟಲ್ ರೋಡ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮರೈನ್ ಡ್ರೈವ್‌ನಿಂದ ಹಾಜಿ ಅಲಿ ಕಡೆಗೆ ತೆರಳುತ್ತಿದ್ದ ಈ ಕಾರು ಅಪಘಾತದ ತೀವ್ರತೆಗೆ ಸಂಪೂರ್ಣ ನಜ್ಜುಗುಜ್ಜಾಗಿದೆ. 

Home add -Advt

ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಸಿಗದೆ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶನಾಯ್ ಗಜ್ಜಲ್, ಧಿರ್ಯಾ ಸೇರ್ ಹಾಗೂ ಮತ್ತೊಬ್ಬ ಯುವಕ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ 20 ವರ್ಷದ ಯುವಕನನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಯ ಟ್ರಾಮಾ ವಾರ್ಡ್‌ಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.

Related Articles

Back to top button