Kannada NewsLatestNational

*ಭೀಕರ ಅಪಘಾತ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಹೊತ್ತಿಕೊಂಡ ಬೆಂಕಿ: ವೈದ್ಯ ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ವೋಲ್ವೋ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನರರೋಗ ತಜ್ಞ ಡಾ.ಕಸಕುರ್ತಿ ಜಗದೀಶ್ ಸಜೀವ ದಹನಗೊಂಡಿರುವ ಘಟನೆ ನಡೆದಿದೆ.

ತೆಲಂಗಾಣದ ಸೂರ್ಯಪೇಟ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಸೂರ್ಯಪೇಟದ ಪಿಲ್ಲಲಮರ್ರಿ ಬಳಿ ಖಮ್ಮಂ-ಹೈದರಾಬಾದ್ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಬಳಿಕ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

Home add -Advt

ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರಾದರೂ, ಅಗ್ನಿಶಾಮಕ ವಾಹನ ಸ್ಥಳಕ್ಕೆ ತಲುಪುವ ಮುನ್ನವೇ ಕಾರಿನೊಳಗಿದ್ದ ವೈದ್ಯ ಬೆಂಕಿಯಲ್ಲಿ ಸಿಲುಕಿಕೊಂಡಿದ್ದರು. ಕಾರಿನ ನೋಂದಣಿ ಸಂಖ್ಯೆಯ ಆಧಾರದ ಮೇಲೆ ಮೃತರನ್ನು ಕಸಕುರ್ತಿ ಜಗದೀಶ್ ಎಂದು ಗುರುತಿಸಲಾಗಿದೆ. ಅವರು ಖಮ್ಮಂನ ಆಸ್ಪತ್ರೆಯಲ್ಲಿ ನರರೋಗ ತಜ್ಞರಾಗಿ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಜಗದೀಶ್ ಅವರು ಖಮ್ಮಂನಿಂದ ಹೈದರಾಬಾದ್‌ಗೆ ಕುಟುಂಬವನ್ನು ಭೇಟಿಯಾಗಲು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Back to top button