Belagavi NewsBelgaum NewsKannada NewsKarnataka NewsPolitics

*ಕಂಗ್ರಾಳಿ ಕೆ.ಎಚ್‌ನಲ್ಲಿ ₹20 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ–ರುಕ್ಮಾಯಿ ಮಂದಿರದ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಂಗ್ರಾಳಿ ಕೆ.ಎಚ್ ಗ್ರಾಮದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ಸುಮಾರು ₹20 ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶ್ರೀ ವಿಠ್ಠಲ–ರುಕ್ಮಾಯಿ ಮಂದಿರದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ದೇವಸ್ಥಾನ ಸಮಿತಿ ಸದಸ್ಯರು, ಗ್ರಾಮದ ಹಿರಿಯರು ಹಾಗೂ ಮುಖಂಡರೊಂದಿಗೆ ಸೇರಿ ಭೂಮಿಪೂಜೆ ನೆರವೇರಿಸಿದರು. ಧಾರ್ಮಿಕ ಕಾರ್ಯಕ್ರಮದ ಬಳಿಕ ಕಾಮಗಾರಿ ಅಧಿಕೃತವಾಗಿ ಆರಂಭಗೊಂಡಿತು.

Home add -Advt

ಶ್ರೀ ವಿಠ್ಠಲ–ರುಕ್ಮಾಯಿ ಮಂದಿರದ ಸಮುದಾಯ ಭವನವು ಗ್ರಾಮದ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಉಪಯುಕ್ತವಾಗಲಿದೆ. ದೇವಸ್ಥಾನದ ವಿವಿಧ ಕಾರ್ಯಕ್ರಮಗಳು, ಧಾರ್ಮಿಕ ಆಚರಣೆಗಳು, ಸಭೆ–ಸಮಾರಂಭಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಇದರಿಂದ ಅನುಕೂಲವಾಗಲಿದೆ ಎಂದು ಸ್ಥಳೀಯರು ಸಂತಸ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ. ಸಮುದಾಯ ಭವನ ನಿರ್ಮಾಣ ಪೂರ್ಣಗೊಂಡ ಬಳಿಕ ಗ್ರಾಮಸ್ಥರಿಗೆ ಇನ್ನಷ್ಟು ಅನುಕೂಲವಾಗಲಿದ್ದು, ಎಲ್ಲ ವರ್ಗದ ಜನರು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಉತ್ತಮ ಸ್ಥಳಾವಕಾಶ ದೊರೆಯಲಿದೆ.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಸದಸ್ಯರು, ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು, ಯುವ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಕಾಮಗಾರಿಗೆ ಶುಭ ಹಾರೈಸಿದರು.

Related Articles

Back to top button