Kannada NewsKarnataka NewsLatestPolitics

*ಸಚಿವ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು*

ಪ್ರಗತಿವಾಹಿನಿ ಸುದ್ದಿ: ಸಚಿವ ಕೆ.ಎಂ ಶಿವಲಿಂಗೇಗೌಡ ವಿರುದ್ಧ ವಾಯ್ಸ್ ಆಫ್ ಪೀಪಲ್ ಮುಖ್ಯಸ್ಥರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಮೈಸೂರಿನ ವಾಯ್ಸ್ ಆಫ್ ಪೀಪಲ್ ಸಂಸ್ಥೆ ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ. ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ ಎಂಬ ಹೇಳಿಕೆ ನೀಡುವ ಮೂಲಕ ಸಚಿವರು ಜನರಿಗೆ ನೇರವಾಗಿ ಲಂಚ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ವಾಯ್ಸ್ ಆಫ್ ಪೀಪಲ್ ಮುಖ್ಯಸ್ಥ ವಸಂತ ರಾವ್ ಚೌಹಾಣ್, ಇಂತಹ ಹೇಳಿಕೆ ನೀಡಿರುವ ಶಿವಲಿಂಗೇಗೌಡರು ಸಚಿವ ಸ್ಥಾನದಲ್ಲಿರಲು ಅನರ್ಹರು ಎಂದು ಹೇಳಿದ್ದಾರೆ. ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಸಾರ್ವಜನಿಕವಾಗಿ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ರಾಜ್ಯಪಾಲರಿಗೂ ದೂರು ಸಲ್ಲಿಸುವುದಾಗಿ ವಸಂತ ರಾವ್ ಚೌಹಾಣ್ ತಿಳಿಸಿದ್ದಾರೆ. ಸಚಿವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನ ನಡೆಸುವುದಾಗಿಯೂ ಹೇಳಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಹಸಿಲ್ದಾರ್ ಕಚೇರಿ ಆವರಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಚಿವ ಶಿವಲಿಂಗೇಗೌಡ, ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ. ಆದರೆ ಬಲವಂತವಾಗಿ ಹಣ ಕಿತ್ತುಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ಸಭೆಯಲ್ಲಿದ್ದ ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ಸಂಬಳ ನೀಡುವುದಿಲ್ಲವೇ, ಹಣ ಏಕೆ ಕೊಡಬೇಕು ಎಂದು ಪ್ರಶ್ನಿಸಿದ್ದರು. ಸಚಿವರ ಈ ಹೇಳಿಕೆ ಈಗ ಭಾಅರಿ ಚರ್ಚೆಗೆ ಕಾರಣವಾಗಿದೆ.

Related Articles

Back to top button