Election NewsKannada NewsKarnataka NewsPolitics

*ವಿಧಾನ ಪರಿಷತ್ ನಾಲ್ಕು ಸ್ಥಾನಗಳಿಗೆ ಚುನಾವಣೆ: ದಿನಾಂಕ ಘೋಷಿಸಿದ ಚುನಾವಣಾ ಆಯೋಗ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ವಿಧಾನಪರಿಷತ್ ನ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.

ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 23ರಂದು ಮತದಾನ ನಡೆಯಲಿದೆ. ಅಕ್ಟೋಬರ್ 27ಕ್ಕೆ ಫಲಿತಾಂಶ ಪ್ರಕಟವಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಸೆ.29ರಂದು ಅಧಿಸೂಚನೆ ಹೊರಬೀಳಲಿದೆ. ನಾಮಪತ್ರ ಸಲ್ಲಿಸಲು ಅ.6 ಕೊನೆಯ ದಿನವಾಗಿದ್ದು, ಅ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಅ.9ರವರೆಗೆ ನಾಮಪತ್ರ ಹಿಂಪಡೆಯಬಹುದು.

ಬಳಿಕ ಅ.23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅ.27ರಂದು ಮತ ಎಣಿಕೆ ನಡೆಯಲಿದೆ. ಸಂಬಂಧಿತ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.


Related Articles

Back to top button