Belagavi NewsBelgaum NewsElection NewsKannada NewsKarnataka NewsPolitics

*ಎಸ್‌ಐಆರ್‌ ಪ್ರಕ್ರಿಯೆ ವಿಚಾರವಾಗಿ ಬೆಳಗಾವಿಯಲ್ಲಿ ಗಲಾಟೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಸ್‌ಐಆರ್‌ ಪ್ರಕ್ರಿಯೆ ವೇಳೆ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಹಾಗೂ ಗಲಾಟೆ ನಡೆದಿದೆ.

ನಗರದ ವೀರಭದ್ರ ನಗರದ ಉರ್ದು ಶಾಲೆಯಲ್ಲಿ ಘಟನೆ ನಡೆದಿದೆ. ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮುಸ್ಲಿಂ ಮತದಾರರನ್ನು ಗುರಿಯಾಗಿಸಿಕೊಂಡು ಹೆಚ್ಚಿನ ಸಂಖ್ಯೆಯ ಹೆಸರುಗಳನ್ನು ತೆಗೆದುಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಅವರು ತಮ್ಮ ಆಸ್ಪತ್ರೆಯ ಸಿಬ್ಬಂದಿಯನ್ನು ಬಳಸಿಕೊಂಡು, ಅಧಿಕಾರಿಗಳೆಂದು ಪರಿಚಯಿಸಿಕೊಂಡು 200ಕ್ಕೂ ಹೆಚ್ಚು ಫಾರ್ಮ್ ನಂ.7ಗಳಿಗೆ ಬಿಎಲ್‌ಒ ಅವರಿಂದ ಸಹಿ ಮಾಡಿಸಿಕೊಂಡಿದ್ದಾರೆ ಎಂಬುದು ಕಾಂಗ್ರೆಸ್ ಮುಖಂಡರ ಆರೋಪವಾಗಿದೆ.

ವಿಷಯ ತಿಳಿದು ಕಾಂಗ್ರೆಸ್ ಮುಖಂಡ ಅಮನ್ ಸೇಠ್ ಹಾಗೂ ಬಿಜೆಪಿ ಮುಖಂಡ ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ ಎರಡೂ ಪಕ್ಷಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದರು. ಈ ವೇಳೆ ಪರಸ್ಪರ ವಾಗ್ವಾದ ಉಂಟಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿತು.

ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಕೆಲ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಬಳಿಕ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಮಾರ್ಕೆಟ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ಎಸ್‌ಐಆರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಳಿಬಂದಿರುವ ಆರೋಪಗಳ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 

Related Articles

Back to top button