Karnataka NewsLatestPolitics

*ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮೈಸೂರಿನ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಇನ್ಸ್‌ಪೆಕ್ಟರ್ ಧನಂಜಯ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಮಧು ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಈ ಹಿಂದೆ ಇನ್ಸ್‌ಪೆಕ್ಟರ್ ಧನಂಜಯ್ ಅವರು ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಎಚ್ಚರಿಕೆ ನೀಡಿದ್ದನ್ನು ವಿರೋಧಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಪ್ರತಾಪ್ ಸಿಂಹ ಅವರು ಮುಂಚೂಣಿಯಲ್ಲಿದ್ದರು. ಅಲ್ಲದೇ ನೇರ ಸವಾಲು ಹಾಕಿ, ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು.

ಈ ಘಟನೆಯ ಬಳಿಕ ಅವರ ವಿರುದ್ಧ ಒಂದು ಎಫ್‌ಐಆರ್ ದಾಖಲಾಗಿತ್ತು. ಈಗ, ಇನ್ಸ್‌ಪೆಕ್ಟರ್ ಧನಂಜಯ್ ಅವರ ಜಾತಿ ಹೆಸರನ್ನು ಹೇಳಿ ಅವಹೇಳನ ಮಾಡಿದ್ದಾರೆ ಎಂದು ಮಧು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ದಲಿತ ಸಂಘರ್ಷ ಸಮಿತಿ ಮತ್ತು ಇತರೆ ಸಂಘಟನೆಗಳು ನಡೆಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಪ್ರತಾಪ್ ಸಿಂಹ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button