
ಪ್ರಗತಿವಾಹಿನಿ ಸುದ್ದಿ: ಅಟ್ಟಿಕಾ ಗೋಲ್ಡ್ ಕಂಪನಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಅಟ್ಟಿಕಾ ಗೋಲ್ಡ್ ಕಂಪನಿಯ ಕಚೇರಿ ಸೇರಿ ೧೯ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಆಂಧ್ರಪ್ರದೇಶ, ತೆಲಂಗಾಣ, ತಮಿಲುನಾಡು ಸೇರಿದಂತೆ ೧೯ ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ನಾಪತ್ತೆಯಾಗಿದ್ದಾರೆ. ಸಾಕಷ್ಟು ಜನರಿಗೆ ಮೋಸ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಈ ದಾಳಿ ನಡೆದಿದೆ.




