Kannada NewsKarnataka NewsLatest

*ಕೆಪಿಎಸ್ ಸಿ ಹಗರಣ: ಅಭ್ಯರ್ಥಿ ಅರ್ಜಿ ವಜಾಗೊಳಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ನೇಮಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಕೆಎಎಸ್‌ ಅಭ್ಯರ್ಥಿ ಮಮಿತಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಅರ್ಜಿ ವಿಚಾರಣೆ ನಡೆಸಿದ 52ನೇ ಸೆಷನ್ಸ್ ಕೋರ್ಟ್‌ ವಜಾ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಮಿತಾಗೆ ಬಂಧನ ಭೀತಿ ಎದುರಾಗಿದೆ.

ಅಭ್ಯರ್ಥಿ ಮಮಿತಾ ಕೆಎಎಸ್ ಪರೀಕ್ಷೆ ಬರೆದು ಸಂದರ್ಶನ ಎದುರಿಸಿದ್ದರು. ಸಂದರ್ಶನ ಬಳಿಕ ಅಭ್ಯರ್ಥಿಯನ್ನ ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ ಸಂಪರ್ಕ ಮಾಡಿದ್ದರು. ಪರೀಕ್ಷೆಯಲ್ಲಿ ಸೆಲೆಕ್ಟ್ ಆಗಲು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಶಾಂತ ಹೊಸಮನಿಗೆ ಮಮಿತಾ ಹಣ ನೀಡಿದ್ದರು.

ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ಕಾಂತ್‌ಕುಮಾರ್‌ ಎಂಬವರು ದೂರು ನೀಡಿದ್ದರು. ಅಭ್ಯರ್ಥಿ ಮಮಿತಾ ಹಾಗೂ ಶಾಂತ ಹೊಸಮನಿ ವಿರುದ್ಧ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಬಂಧನ ಭೀತಿ ಹಿನ್ನೆಲೆಯಲ್ಲಿ ಮಮಿತಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣ ಸಂಬಂಧ ಸಿಐಡಿ ವಿಚಾರಣೆಗೂ ಹಾಜರಾಗಿದ್ದರು. ಈಗ ಕೋರ್ಟ್‌ ಜಾಮೀನು ಅರ್ಜಿ ವಜಾಗೊಳಿಸಿರುವುದರಿಂದ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ.

Related Articles

Back to top button