Belagavi NewsBelgaum NewsKannada NewsKarnataka News

*ಕರಾವಳಿ, ಮಲೆನಾಡಿನಲ್ಲಿ ಮುಂದಿನ ಮೂರು ದಿನ ಮಳೆ: ಉತ್ತರ ಕರ್ನಾಟಕದಲ್ಲಿ ಮುಂದುವರಿದ ಬರದ ಛಾಯೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಸಾಧಾರಣವಾಗಿ ಮುಂದುವರಿಯುವ ಸಾಧ್ಯತೆ ಇದೆ.

ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯೂ ಕರಾವಳಿಯ ಕೆಲವೆಡೆ ಮಳೆ ಮುಂದುವರಿಯಲಿದೆ.

ಇದೇ ವೇಳೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದ್ದು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಮೂರು ದಿನಗಳ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

Related Articles

Back to top button