CrimeKannada NewsKarnataka NewsLatest

ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ: ಸಾವಿಗೂ ಮುನ್ನ ಯುವಕನ ವಿರುದ್ಧ ಗಂಭೀರ ಆರೋಪ

ಪ್ರಗತಿವಾಹಿನಿ ಸುದ್ದಿ: ಅಕ್ರಮ ಸಂಬಂಧದ ವಿಚಾರದಲ್ಲಿ ಯುವಕನೊಬ್ಬ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನೆಂಬ ಆರೋಪದಿಂದ ಮನನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ಮಹಿಳೆಯನ್ನು 34 ವರ್ಷದ ಸಿಂಧೂ ಎಂದು ಗುರುತಿಸಲಾಗಿದೆ. ಸಿಂಧೂ ಶ್ರೀಕಾಂತ್ ಎಂಬುವವರ ಪತ್ನಿಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕ್ರಿಮಿನಾಶಕ ಮಾತ್ರೆ ಸೇವಿಸಿದ್ದ ಸಿಂಧೂ ಅವರನ್ನು ತಕ್ಷಣ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೂ ಮುನ್ನ ಸಿಂಧೂ ನೀಡಿರುವ ಹೇಳಿಕೆಯಲ್ಲಿ ವಿಕಾಸ್ ಎಂಬಾತನೇ ತಮ್ಮ ಸಾವಿಗೆ ಕಾರಣ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಕಾಸ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಕೇಳಿಬಂದಿದೆ.

ಸಿಂಧೂ ಅವರ ಮೊಬೈಲ್ ಪರಿಶೀಲನೆ ನಡೆಸಿದ ವೇಳೆ ವಿಕಾಸ್ ಜೊತೆ ನಿರಂತರವಾಗಿ ವಾಟ್ಸ್‌ಆ್ಯಪ್ ಸಂದೇಶ ಹಾಗೂ ವಿಡಿಯೋ ಕಾಲ್‌ಗಳು ನಡೆದಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ. ಎಲ್.ಕೆ. ವಿಕಾಸ್, ಅವರ ತಂದೆ ಕುಮಾರ ಹಾಗೂ ತಾಯಿ ವಸಂತ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Back to top button