CrimeKarnataka NewsLatestPolitics

*ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್​ ಅವರಿಗೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ.

2025ರ ಮೇ ತಿಂಗಳಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ನಡೆದಿತ್ತು. ಹತ್ಯೆ ವೇಳೆ ಆರೋಪಿಗಳ ಜೊತೆ ಕಲ್ಲಡ್ಕ ಪ್ರಭಾಕರ್ ಭಟ್ ನಿರಂತರ ಫೋನ್ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಪ್ರಭಾಕರ್ ಭಟ್ ಅವರಿಗೆ ನೋಟಿಸ್ ಜಾರಿ ಮಾಅಡಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯ ಸಹಾಯಕ ತನಿಖಾಧಿಕಾರಿ ಪಿ.ಕಲೈಮಾರ್​ ಅವರು ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆ ನಡೆಯಲಿದೆ. ನಾಳೆ ಸೆ.26ರಂದು ಕಲ್ಲಡ್ಕದ ಮನೆಯಲ್ಲೇ ಪ್ರಭಾಕರ್​ ಭಟ್ ಅವರ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button