CrimeKannada NewsKarnataka NewsLatest

*ಪ್ರೇಮಾನಂದ ಮಹಾರಾಜರ ಶಿಷ್ಯ ಸಾವು*: *4ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ವೃಂದಾವನದಲ್ಲಿ ವ್ಯಕ್ತಿಯೊಬ್ಬರು ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ದೀಪಕ್ ಲೋಧಿ ಎಂದು ಗುರುತಿಸಲಾಗಿದೆ. ಪ್ರೇಮಾನಂದ ಮಹಾರಾಜರ ಆಶ್ರಮದ ಸಮೀಪದ ವಸತಿ ಸಮುಚ್ಚಯದಲ್ಲಿ ಅವರು ವಾಸಿಸುತ್ತಿದ್ದರು.

ವೃಂದಾವನದ ಕಟ್ಟಡವೊಂದರ ನಾಲ್ಕನೇ ಮಹಡಿಯಿಂದ ದೀಪಕ್ ಲೋಧಿ ಕೆಳಗೆ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದು ವೃಂದಾವನ ಕೊತ್ವಾಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ದೀಪಕ್ ಲೋಧಿ ಕಳೆದ ಒಂದೂವರೆ ವರ್ಷದಿಂದ ಪ್ರೇಮಾನಂದ ಮಹಾರಾಜರ ಆಶ್ರಮದ ಹಿಂಭಾಗದಲ್ಲಿರುವ ವಸತಿ ಸಮುಚ್ಚಯದಲ್ಲಿ ವಾಸಿಸುತ್ತಿದ್ದರು. ಮೂಲತಃ ಮಧ್ಯಪ್ರದೇಶದ ಜಬಲ್‌ಪುರದವರಾಗಿದ್ದ ಅವರು ‘ರಸಿಕ್ ದುಲಾರಿ ಶರಣ್’ ಎಂಬ ಹೆಸರಿನಿಂದಲೂ ಪರಿಚಿತರಾಗಿದ್ದರು.

ಪೊಲೀಸರು ಪ್ರಾಥಮಿಕವಾಗಿ ಆತ್ಮಹತ್ಯೆಯ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕಿದೆ.

ಘಟನೆಯ ಕುರಿತು ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರಿದಿದ್ದು, ಮರಣೋತ್ತರ ಪರೀಕ್ಷೆಯ ವರದಿ ಸೇರಿದಂತೆ ಇತರ ಸಾಕ್ಷ್ಯಗಳನ್ನು ಆಧರಿಸಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button