CrimeKarnataka NewsLatest

*BREAKING: ಪವಿತ್ರಾಗೌಡಗೆ ಮತ್ತೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾಗೌಡಗೆ ಕೋರ್ಟ್ ಬಿಗ್ ಶಾಕ್ ನೀಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್ ಗೆಳತಿ, ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.

ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ನ್ಯಾಯಾಧೀಶೆ ಸುಜಾತಾ ಸಾಂಬ್ರಾಣಿ ಆದೇಶ ಹೊರಡಿಸಿದ್ದಾರೆ.

ಜಾಮೀನಿನ ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ನಿರಾಸೆಯಾಗಿದ್ದು, ಮತ್ತೆ ಪರಪ್ಪನ ಅಗ್ರಹಾರ ಜೈಲು ವಾಸವೇ ಗತಿಯಾಗಿದೆ.

ಮತ್ತೊಂದೆಡೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗುವುದನ್ನು ತಡೆಯಲು ಯತ್ನಿಸುತ್ತಿದ್ದ ಕೊಲೆ ಆರೋಪಿ ನಟ ದರ್ಶನ್ ಗೂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.

ಇತ್ತೀಚೆಗಷ್ಟೆ ವಿಚಾರಣಾ ನ್ಯಾಯಾಲಯವು ಪ್ರದೋಶ್ ಮಾಫಿ ಸಾಕ್ಷಿ ಹೇಳಿಕೆಗೆ ಸೆಪ್ಟೆಂಬರ್ 28ರ ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿತ್ತು. ಆದರೆ ದರ್ಶನ್ ಪರ ವಕೀಲರು ಮತ್ತೊಮ್ಮೆ ಹೊಸ ಅರ್ಜಿ ದಾಖಲಿಸಿ ಮಾಅಫಿ ಸಾಕ್ಷಿ ವಿಚಾರಣೆ ಮುಂದೂಡುವಂತೆ ಕೋರಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ 59ನೇ ಸಿಸಿಹೆಚ್ ಕೋರ್ಟ್ ಮತ್ತೊಮ್ಮೆ ದರ್ಶನ್ ಅರ್ಜಿಯನ್ನು ರದ್ದು ಮಾಡಿದೆ. ಆ ಮೂಲಕ ಸೋಮವಾರ ಸೆಪ್ಟೆಂಬರ್ 28ರಂದೆ ಪ್ರದೋಶ್ ಮಾಫಿ ಸಾಕ್ಷಿ ದಾಖಲಿಸುವುದು ಖಚಿತವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button