*ಇಂಜಿನಿಯರ್ ನಾಪತ್ತೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಗದಗ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಫರ್ವೀಜ್ ಧಾರವಾಡ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮರ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಕಾಣೆಯಾದ ಎಇಇ ವಿರುದ್ಧ ಸ್ಥಳೀಯ ಬಿಜೆಪಿ ಶಾಸಕರೊಬ್ಬರು ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ ಎಂದರು.
ಆ ಅಧಿಕಾರಿ ವಿರುದ್ಧ ಈಗಾಗಲೇ ಹಲವು ದೂರುಗಳು ಬಂದಿದ್ದು, ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ಕೆಲಸ ಮಾಡುತ್ತಿರಲಿಲ್ಲ ಎಂಬ ದೂರು ಇದೆ. ನಾವು ಯಾವುದೇ ಕಾಮಗಾರಿ ನಡೆದರೂ ಕಾಮಗಾರಿಗೂ ಮುನ್ನ ಹಾಗೂ ನಂತರ ಆ ಸ್ಥಳ ಹೇಳಿದೆ ಎಂದು ವಿಡಿಯೋ ದಾಖಲೆ ಹೊಂದಿರಬೇಕು. ಆಮೂಲಕ ನಕಲಿ ಬಿಲ್ ವಂಚನೆ ತಡೆಯಬೇಕು ಎಂದು ಸೂಚಿಸಿದ್ದೇವೆ. ಆದರೆ ಈತ ಸ್ಥಳಗಳಿಗೆ ಭೇಟಿ ನೀಡುತ್ತಿರಲಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
ಅಲ್ಲದೇ ಇಂಜಿನಿಯರ್ ಫರ್ವೀಜ್ ಈ ಹಿಂದೆ ಕೂಡ ನಾಪತ್ತೆಯಾಗಿದ್ದ ಎಂಬ ಮಾಹಿತಿ ಇದೆ. ಪ್ರಸ್ತುತ ಅಜ್ಮೀರ್, ಹೈದರಾಬಾದ್ ಗೆ ಹೋಗಿರುವ ಬಗ್ಗೆಯೂ ಮಾಹಿತಿ ಇದೆ. ಎಲ್ಲವನ್ನೂ ಪರಿಶೀಲಿಸಲಾಗುತ್ತಿದೆ. ಆತನನ್ನು ಪತ್ತೆ ಮಾಡಿ ತನಿಖೆ ನಡೆಸಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




