Kannada NewsLatestWorld

*ಬಾರ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಗುಂಡಿನ ದಾಳಿ: 17 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬಾರ್‌ವೊಂದರಲ್ಲಿ ದುಷ್ಕರ್ಮಿಗಳು ನಡೆಸಿದ ಏಕಾಏಕಿ ಗುಂಡಿನ ದಾಳಿಯಲ್ಲಿ 17 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಜೋಹಾನ್ಸ್‌ಬರ್ಗ್‌ನ ನೈಋತ್ಯದಲ್ಲಿರುವ ವೆಡೆಲಾದ ವೆಸ್ಟ್ ರಾಂಡ್ ಪ್ರದೇಶದಲ್ಲಿನ ಬಾರ್ ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 13 ಜನ ಪುರುಷರು ಮತ್ತು ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾಳಿಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ ಎಂದು ದಕ್ಷಿಣ ಆಫ್ರಿಕಾದ ಪೊಲೀಸ್ ಇಲಾಖೆ ತಿಳಿಸಿದೆ.

ಗೌಟೆಂಗ್ ಪ್ರಾಂತ್ಯದಲ್ಲಿ ಶನಿವಾರ ರಾತ್ರಿ 9:30 ರ ಸುಮಾರಿಗೆ ಈ ಘಟನೆ ನಡೆದಿದೆ. ದಾಳಿ ನಡೆಸಲು ಬಂದಿದ್ದ ಶಂಕಿತರು ಎಕೆ-47 ರೈಫಲ್‌ಗಳು ಮತ್ತು ಪಿಸ್ತೂಲ್‌ಗಳನ್ನ ಹೊಂದಿದ್ದರು ಎನ್ನಲಾಗಿದೆ.

8 ಜನ ಶಂಕಿತರು ಬಾರ್‌ ಹೊರಗಡೆ ಮದ್ಯಪಾನ ಮಾಡುತ್ತಿದ್ದ ಗ್ರಾಹಕರ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಒಳಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ 15 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button