CrimeKannada NewsKarnataka News

*ಕಾಲೇಜಿನ ಬಳಿಯೇ ಬೆಳ್ಳಂ ಬೆಳಗ್ಗೆ ಆನೆ ದಾಳಿ: ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕೆಂಗೇರಿ ಸಮೀಪದ ಆರ್‌.ಆರ್‌. ವೈದ್ಯಕೀಯ ಕಾಲೇಜಿನ ಹಿಂಭಾಗದಲ್ಲಿ ಆನೆ ದಾಳಿ ನಡೆಸಿದ ಶಂಕೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಅಂಚೆಪಾಳ್ಯ ಗ್ರಾಮದ ನಿವಾಸಿ ನಾಗರಾಜ್ ಮೃತ ದುರ್ದೈವಿ. ಇಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ನಾಗರಾಜ್ ವಾಕಿಂಗ್‌ಗೆ ತೆರಳಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳದಲ್ಲಿ ಎರಡು ಕಾಂಪೌಂಡ್‌ಗಳು ಉರುಳಿ ಬಿದ್ದಿರುವುದು ಕಂಡುಬಂದಿದ್ದು, ಆನೆ ದಾಳಿ ನಡೆಸಿದ ಪರಿಣಾಮವೇ ಕಾಂಪೌಂಡ್‌ಗಳು ಧ್ವಂಸಗೊಂಡಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ವಾಕಿಂಗ್‌ಗೆ ತೆರಳಿದ್ದ ನಾಗರಾಜ್‌ ಮೇಲೆ ಆನೆ ದಾಳಿ ನಡೆಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಘಟನೆಯ ಕುರಿತು ಅರಣ್ಯ ಇಲಾಖೆ ಹಾಗೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button