
ಪ್ರಗತಿವಾಹಿನಿ ಸುದ್ದಿ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾರೆಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಆರ್ ಪಿ ಎಫ್ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ. 2013ರಲ್ಲಿ ನಡೆದಿದ್ದ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಂಧನವಾಗಿದೆ.
ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು 2013ರಲ್ಲಿ ಸತತ ಆರು ಗಂಟೆಗಳ ಕಾಲ ರೈಲ್ವೆ ತಡೆ ನಡೆಸಿ ರೈತರಿಂದ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇದೇ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



