
ಪ್ರಗತಿವಾಹಿನಿ ಸುದ್ದಿ: ಟಾಟಾ ಸುಮೋ ವಾಹನ ಕಂದಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಮ್ಮು-ಕಾಶ್ಮೀರದ ಕರನಾಹ್‌ನಲ್ಲಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಸುಮೋ ವಾಹನ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಂಗ್ಧಾರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಪಡೆಗಳು ಧಾವಿಸಿ ಪರಿಹಾರ ಕಾರ್ಯಾಚರಣೆ ನಡೆಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




