Belagavi NewsBelgaum NewsKarnataka NewsLatestPolitics

*BREAKING: ಸಚಿವ ಲಕ್ಷ್ಮಣ ಸವದಿಗೆ ಕೋರ್ಟ್ ನಿಂದ ಸಮನ್ಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಸಹಕಾರ ಸಚಿವ ಲಕ್ಷ್ಮಣ ಸವದಿ ಅವರಿಗೆ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿದೆ. ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚನೆ ನೀಡಲಾಗಿದೆ.

2018ರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ 4 ನೇ ಜೆಸಿ ಎಂ ಎಂ ಕೋರ್ಟ್ ಸಚಿವ ಲಕ್ಷ್ಮಣ ಸವದಿ ಅವರಿಗೆ ಸಮನ್ಸ್ ನೀಡಿದೆ. ಅಕ್ಟೋಬರ್ 9 ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಲಾಗಿದೆ.

ರಾಜು ಜಮಖಂಡಿಕರ್ ಎಂಬುವವರು ತಳವಾರ ಸಮುದಾಯಕ್ಕೆ ಎಷ್ಟು ಅನುದಾನ ನೀಡಿದ್ದೀರಿ? ಎಂದು ಪ್ರಶ್ನೆ ಮಾಡಿದ್ದರು. ಇದರಿಂದ ಕೋಪಗೊಂಡಿದ್ದ ಲಕ್ಷ್ಮಣ ಸವದಿ ಬೆಂಬಲಿಗರು, ಸವದಿ ಅವರ ಸಮ್ಮುಖದಲ್ಲಿಯೇ ರಾಜು ಮೇಲೆ ಹಲ್ಲೆ ನಡೆಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸಚಿವರಿಗೆ ಸಮನ್ಸ್ ಜಾರಿಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button