
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಚಲನಚಿತ್ರ ಯೋಜನೆಗಳ ಹೆಸರಿನಲ್ಲಿ ವಿದೇಶಕ್ಕೆ ಹಣ ವರ್ಗಾವಣೆ ಎಂಬ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆಯು ರಕುಲ್ ಪ್ರೀತ್ ಸಿಂಗ್ ಸೇರಿದಂತೆ ಚಲನಚಿತ್ರೋದ್ಯಮದ ಹಲವು ಗಣ್ಯರು ಮತ್ತು ಅವರ ಕಂಪನಿಗಳಿಗೆ ಸಂಬಂಧಿಸಿದ ಸುಮಾರು 12 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ರಕುಲ್ ಪ್ರೀತ್ ಸಿಂಗ್, ನಿರ್ಮಾಪಕ ವಾಶು ಭಗ್ನಾನಿ ಮತ್ತು ಪನೋರಮಾ ಸ್ಟುಡಿಯೋಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆದಿದೆ.
ರಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ಮೇ 15ರಂದು ಬಿಡುಗಡೆಯಾದ ‘ಪತಿ ಪಟ್ನಿ ಔರ್ ವೋ ದೋ’ ಚಿತ್ರದಲ್ಲಿ ಆಯುಷ್ಮಾನ್ ಖುರಾನಾ, ಸಾರಾ ಅಲಿ ಖಾನ್ ಅವರೊಂದಿಗೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ವಶು ಭಗ್ನಾನಿ ಅವರ ಪೂಜಾ ಎಂಟರ್‌ಟೈನ್‌ಮೆಂಟ್ ಸಂಸ್ಥೆಯು ಕೊನೆಯದಾಗಿ ‘ಮೇರೆ ಹಸ್ಬೆಂಡ್ ಕಿ ಬಿವಿ’ ಚಿತ್ರವನ್ನು ನಿರ್ಮಿಸಿತ್ತು. ಅರ್ಜುನ್ ಕಪೂರ್, ಭೂಮಿ ಪೆಡ್ನೇಕರ್ ಮತ್ತು ರಕುಲ್ ಪ್ರೀತ್ ಸಿಂಗ್ ನಟಿಸಿದ್ದ ಈ ಸಿನಿಮಾ ಫೆಬ್ರವರಿ 21, 2025 ರಂದು ತೆರೆಕಂಡಿತ್ತು. ಮತ್ತೊಂದೆಡೆ, ಪನೋರಮಾ ಸ್ಟುಡಿಯೋಸ್ ಸಂಸ್ಥೆಯ ಇತ್ತೀಚಿನ ಚಿತ್ರ ‘ಧಮಾಲ್ 4’ ಆಗಿದ್ದು, ಇದು ಜುಲೈ 10ರಂದು ಬಿಡುಗಡೆಯಾಗಿದೆ. ಇದೇ ನಿರ್ಮಾಣ ಸಂಸ್ಥೆಯಿಂದ ಬಿಡುಗಡೆಯಾಗಲಿರುವ ಮುಂದಿನ ಬಹುನಿರೀಕ್ಷಿತ ಚಿತ್ರ ‘ದೃಶ್ಯಂ: ದಿ ಕನ್ಕ್ಲೂಷನ್’ ಇದು ಅಕ್ಟೋಬರ್ 2ರಂದು ಬಿಡುಗಡೆಗೆ ಸಜ್ಜಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



