*ಬೆಂಗಳೂರಿಗೆ ಸೇರಿ 19 ಜಿಲ್ಲೆಗಳಲ್ಲಿ ಮಳೆ ಅಲರ್ಟ್*: *ಮುಂದಿನ 3 ಗಂಟೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಮತ್ತೆ ಚುರುಕಾಗಿದ್ದು, ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕೆಲವು ಕಡೆ ಬಿರುಗಾಳಿಯೂ ಬೀಸುವ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಈ ಭಾಗಗಳಲ್ಲಿ ಜನರು ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಇದರ ಜೊತೆಗೆ ಉತ್ತರ ಕನ್ನಡ, ಹಾವೇರಿ, ಬಳ್ಳಾರಿ, ವಿಜಯನಗರ, ಗದಗ, ಕೊಪ್ಪಳ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲೂ ಗುಡುಗು-ಸಿಡಿಲು ಸಹಿತ ಮಳೆಯ ಸಾಧ್ಯತೆ ಇದೆ. ಕೆಲವೆಡೆ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆ ವಹಿಸುವ ಅಗತ್ಯವಿದೆ.
ಮುಂದಿನ ಕೆಲವು ಗಂಟೆಗಳಲ್ಲಿ ಹವಾಮಾನದಲ್ಲಿ ತ್ವರಿತ ಬದಲಾವಣೆ ಸಂಭವಿಸುವ ಸಾಧ್ಯತೆ ಇರುವುದರಿಂದ ಜನರು ಅನಗತ್ಯವಾಗಿ ಹೊರಗೆ ತೆರಳದಂತೆ ಹಾಗೂ ಮಳೆಯ ಸಂದರ್ಭದಲ್ಲಿ ಮರಗಳು, ವಿದ್ಯುತ್ ಕಂಬಗಳ ಕೆಳಗೆ ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




