Kannada NewsLatestNationalPolitics

*ಪೊಲೀಸ್ ಠಾಣೆಯಲ್ಲೇ ಶಿವಸೇನೆ ನಾಯಕನ ಮೇಲೆ ಮಹಿಳಾ ಉದ್ಯಮಿಯಿಂದ ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಹಣಕಾಸಿನ ವಿವಾದ ಬಗೆಹರಿಸಿಕೊಳ್ಳಲು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಶಿವಸೇನೆಯ ಯುವ ನಾಯಕ ಸಿದ್ದೇಶ್ ಅಭಂಗೇ ಅವರ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಸೋಮವಾರ (ಸೆ.28) ರಾತ್ರಿ ಕೋಪ್ರಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಜವಳಿ ಉದ್ಯಮದಲ್ಲಿ ತೊಡಗಿರುವ ಕೆಲವು ಮಹಿಳೆಯರು ಹಾಗೂ ಸಿದ್ದೇಶ್ ಅಭಂಗೇ ಅವರ ನಡುವೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಉಂಟಾಗಿತ್ತು ಎನ್ನಲಾಗಿದೆ.

ವಿವಾದ ಬಗೆಹರಿಸಿಕೊಳ್ಳುವ ಉದ್ದೇಶದಿಂದ ಮಹಿಳೆಯರ ಗುಂಪು ಹಾಗೂ ಸಿದ್ದೇಶ್ ಅಭಂಗೇ ಠಾಣೆಗೆ ಆಗಮಿಸಿದ್ದರು. ಈ ವೇಳೆ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಆರೋಪದ ಪ್ರಕಾರ, ಮಹಿಳಾ ಉದ್ಯಮಿಯೊಬ್ಬರು ತನ್ನ ಸಹಚರನೊಂದಿಗೆ ಸೇರಿ ಸಿದ್ದೇಶ್ ಅಭಂಗೇ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಠಾಣೆಯಲ್ಲಿದ್ದ ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯ ಬಳಿಕ ಕೋಪ್ರಿ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಮುಂದಾಗಿದ್ದು, ಎರಡೂ ಕಡೆಯವರ ಹೇಳಿಕೆಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button