
ಪ್ರಗತಿವಾಹಿನಿ ಸುದ್ದಿ: 444 ಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
DPAR ಅಡಿಯಲ್ಲಿನ KSDC ಹಾಗೂ KSWANನಲ್ಲಿ 444 ಕೋಟಿ ಹಗರಣದ ಆಗಿದೆ ಎಂದು ಆರೋಪಿಸಿ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ಕೆ ದೂರು ನೀಡಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಜೊತೆಗೆ ಐಎಎಸ್ ಅಧಿಕಾರಿ ಭೂಬಾಲನ್ ವಿರುದ್ಧವೂ ದಾಖಲೆ ಸಮೇತ ದೂರು ನೀಡಿದ್ದಾರೆ. 2025ರಲ್ಲಿ ಕರೆದಿದ್ದ ಟೆಂಡರ್ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದೆ. ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್ ನೀಡಿದ್ದಾರೆಂದು ದೂರಲಾಗಿದೆ. ಈ ಟೆಂಡರ್ ಪ್ರಕ್ರಿಯೆ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದೆ.
ಅಂದಿನ ಸಿಎಂ ತಮ್ಮ ಬಳಿಯೇ DPAR ಇಲಾಖೆ ಉಳಿಸಿಕೊಂಡಿದ್ರು. ಹೀಗಾಗಿ ಯತೀಂದ್ರ ಸಿದ್ದರಾಮಯ್ಯ ಅಣತಿ ಮೇರೆಗೆ ಟೆಂಡರ್ ನೀಡಿದ ಆರೋಪ ಕೇಳಿಬಂದಿದೆ. ಅರ್ಹತೆಯೇ ಇಲ್ಲದ ಹೈದರಾಬಾದ್ ಮೂಲದ ಕಂಪನಿಗೆ ಟೆಂಡರ್ ನೀಡಲಾಗಿದೆ. ಇ-ಆಡಳಿತ ವಿಭಾಗದ ಸಿಇಒ ಅಧಿಕಾರಿ ಭೂಬಾಲನ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧವೂ ದೂರು ನೀಡಲಾಗಿದೆ. ಸಚಿವ ಯತೀಂದ್ರ ಸಿದ್ದರಾಮಯ್ಯ ಹಾಗೂ ಅಧಿಕಾರಿಗಳ ವಿರುದ್ಧ ತನಿಖೆಗೆ ರಮೇಶ್ ಆಗ್ರಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



