Latest

ಸಚಿವ ಡಿಕೆಶಿ ನೇತೃತ್ವದಲ್ಲಿ ಕೆಆರೆಸ್ ಉದ್ಯಾನವನ ಉನ್ನತೀಕರಣ ಸಲಹಾ ಸಮಿತಿ ರಚನೆ

    ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ವಿಶ್ವಮಟ್ಟದಲ್ಲಿ ಕೆಆರ್ ಎಸ್ ಉದ್ಯಾನವನ ಉನ್ನತೀಕರಣ ಸಂಬಂಧ  ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಲಹಾ ಸಮಿತಿ ರಚಿಸಲಾಗಿದೆ.
ಯೋಜನೆ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳ ನಿವಾರಣೆ ಸೇರಿದಂತೆ ಸಲಹೆ-ಸೂಚನೆಗಳನ್ನು ನೀಡುವ ಈ ಸಮಿತಿಯಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್, ಲೋಕಸಭಾ ಸದಸ್ಯರಾದ ಎಲ್. ಆರ್. ಶಿವರಾಮೇಗೌಡ ಹಾಗೂ ಪ್ರತಾಪ್ ಸಿಂಹ, ರಾಜಮಾತೆ ಡಾ. ಪ್ರಮೋದಾ ದೇವಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಧಿಕಾರಿಗಳನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button