
ಪ್ರಗತಿವಾಹಿನಿ ಸುದ್ದಿ: ಮನ್ ಮುಲ್ ಹಾಲಿನ ಪುಡಿಯಲ್ಲಿ ಕಲಬೆರಿಕೆ ಪ್ರಕರಣದಲ್ಲಿ ಮಂಡ್ಯದ ಕಾಂಗ್ರೆಸ್ ಮುಖಂಡ ಶಿವಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮನ್ ಮುಲ್ ಹಾಲಿನ ಪುಡಿಯಲ್ಲಿ ಕಲಬೆರಿಕೆಯಾಗಿರುವುದು ಪ್ರಯೋಗಾಲಯದ ವರದಿಯಲ್ಲಿ ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಮನ್ ಮುಲ್ ಮಾಜಿ ಅಧ್ಯಕ್ಷ ಶಿವಕುಮಾರ್ ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಗೆ ತಾವೇ ಖುದ್ದಾಗಿ ಬಂದು ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಶಿವಕುಮಾರ್ ಕಳೆದ ವಿಧನಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪಕ್ಷದ ಟಿಕೆಟ್ ಕೈತಪ್ಪಿದ್ದ ಕಾರಣ ಅವರನ್ನು ಮನ್ ಮುಲ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




