
ಪ್ರಗತಿವಾಹಿನಿ ಸುದ್ದಿ: ಮದುವೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದುದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಭಿಷೇಕ್ (25) ಆತ್ಮಹತ್ಯೆಗೆ ಶರಣಾದ ಯುವಕ. ಈತನಿಗೆ ಕಳೆದ ತಿಂಗಳಷ್ಟೆ ಮದುವೆ ನಿಶ್ಚಯವಾಗಿತ್ತು. ಮುಂದಿನ ತಿಂಗಳು 25ಕ್ಕೆ ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಎರಡೂ ಮನೆಯವರು ಮದುವೆ ಸಂಭ್ರಮದಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದರು.
ಆದರೆ ಯುವಕನಿಗೆ ಅದೇನಾಯಿತೋ ಏನೋ ಕಳೆದ 4 ದಿನದ ಹಿಂದೆ ಮನೆಯಲ್ಲೇ ಯುವಕ ವಿಷ ಸೇವಿಸಿದ್ದ. ಆತನನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.
ಮದುವೆಯ ಸಂಭ್ರಮದಲ್ಲಿದ್ದ ಎರಡೂ ಮನೆಯಲ್ಲಿ ಸೂತಕದ ಛಾಯೆ ಆವರಸಿದೆ. ಅಭಿಷೇಕ್ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




