
ಪ್ರಗತಿವಾಹಿನಿ ಸುದ್ದಿ: ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳ ಪದಕ ಬೇಟೆ ಮುಂದುವರಿದಿದ್ದು, ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದಿದೆ.
ಟ್ರ್ಯಾಕ್ ವಿಭಾಗದಲ್ಲಿ ಆರಂಭದಿಂದಲೇ ಉತ್ತಮ ಪ್ರದರ್ಶನ ನೀಡಿದ ಭಾರತೀಯ ಮಹಿಳಾ ರಿಲೇ ತಂಡ, 4×400 ಮೀಟರ್ ಓಟವನ್ನು ಅಗ್ರಸ್ಥಾನದಲ್ಲಿ ಪೂರ್ಣಗೊಳಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿತು.
ಈ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಪದಕಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಭಾರತೀಯ ತಂಡದ ಈ ಸಾಧನೆಗೆ ಕ್ರೀಡಾಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




