Kannada NewsKarnataka NewsLatest

*ನಕಲಿ ಔಷಧ ಜಾಲ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಕಲಿ ಔಷಧ ಜಾಲ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ಪಿನ್ ಪ್ರಶಾಂತ್ ಬಳಿಕ ಮತ್ತೊಬ್ಬ ಆರೋಪಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಬಾಲಸುಬ್ರಮಣಿಯನ್ ಬಂಧಿತ ಆರೋಪಿ. ಚೆನ್ನೈನಲ್ಲಿ ಬಾಲಸುಬ್ರಮಣಿಯನ್ ನನ್ನು ಬಂಧಿಸಲಾಗಿದೆ, ಈತ ಬಾಲಸುಬ್ರಮಣಿಯನ್ ಪ್ರಶಾಂತ್‌ನ ಡಮ್ಮಿ ಕಂಪನಿಗೆ ಮಾಲೀಕನಾಗಿದ್ದ ಎಂದು ತಿಳಿದುಬಂದಿದೆ.

ಸೋಮವಾರ ಬೆಂಗಳೂರುನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಿಂಗ್ ಪಿನ್ ಪ್ರಶಾಂತ್‌ನನ್ನ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಪ್ರಕರಣ ಬೆಳಕಿಗೆ ಬಂದ ಬಳಿಕ ಆತ ಅಜರ್‌ಬೈಜಾನ್‌ನಲ್ಲಿ ತಲೆಮರೆಸಿಕೊಂಡಿದ್ದ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿದ್ದವು. ವಿದೇಶದಿಂದ ವಾಪಸ್ ಬಂದ ಸಂದರ್ಭದಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಅಧಿಕಾರಿಗಳು ಆತನನ್ನ ಬಂಧಿಸಿದ್ದಾರೆ. ನಕಲಿ ಔಷಧಿ ಪ್ರಕರಣದಲ್ಲಿ ಆರೋಪಿ ವೀರೇಶ್ ಜೈನ್ ನೀಡಿರುವ ಹೇಳಿಕೆಯ ಆಧಾರದ ಮೇಲೆ ಪ್ರಶಾಂತ್‌ನನ್ನ ಬಂಧಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button